ಸೇತುವೆಗೆ ಕಾರು ಡಿಕ್ಕಿ, ನಾಲ್ವರ ಸಾವು

201

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಗದಗ ಜಿಲ್ಲೆಯ ಮಾರ್ಗವಾಗಿ ಚಲಿಸುತ್ತಿದ್ದಾಗ ಈ ದುರಂತ ನಡೆದಿದೆ.

ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಇದ್ದು, ತೆಲಂಗಾಣ ಮೂಲದವರು ಎಂದು ಹೇಳಲಾಗುತ್ತಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಗೆ ಏನು ಕಾರಣ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!