ಕೋಲಾರದಲ್ಲಿ ಕಾರು ಅಪಘಾತ: ದಂಪತಿ ಸಾವು

194

ಪ್ರಜಾಸ್ತ್ರ ಸುದ್ದಿ

ಕೋಲಾರ: ಕಾರೊಂದು ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ದಂಪತಿ ಮೃತಪಟ್ಟ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಕ್ರಾಸ್ ಹತ್ತಿರ ನಡೆದಿದೆ. ಆಂಧ್ರದ ಮದನಪಲ್ಲಿಯ ಸಫಿ(55) ಹಾಗೂ ಶಮಾ(50) ಮೃತ ದುರ್ದೈವಿಗಳು.

ಬೆಂಗಳೂರಿನಿಂದ ಮದನಪಲ್ಲಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಬಲಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿದೇಶಕ್ಕೆ ಹೋದ ಮಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಗೌನಿಪಲ್ಲಿ ಪೊಲೀಸರು ತಿಳಿಸಿದ್ದಾರೆ. ಅತಿಯಾದ ವೇಗವಕ್ಕೆ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!