ಕೆರೆಗೆ ಬಿದ್ದ ಕಾರು, ಚಾಲಕ ಸಾವು

119

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆಯಲ್ಲಿ ನಡೆದಿದೆ. ಅದೇ ಗ್ರಾಮದ ದಿನೇಶ್(33) ಎಂಬುವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಂತೋಷ್ ಎಂಬುವರು ಅದೃಷ್ಟವಶಾತ್ ಪಾರಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ದಿನೇಶ್, ಅಂಬಳೆ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಕಾರಿನೊಳಗೆ ಸಿಲುಕಿದ ದಿನೇಶ್ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!