ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ನಾಲ್ವರ ಸಾವು

96

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬೆಳ್ಳಂಬೆಳಗ್ಗೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಹತ್ತಿರ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಬಾಲಕನೊಬ್ಬ ಮೃತಪಟ್ಟಿದ್ದಾನೆ. ವಿಜಯಪುರದಿಂದ ಜಮುಖಂಡಿಗೆ ಹೊರಟಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಮಧ್ಯೆ ಅಪಘಾತ ನಡೆದಿದೆ. ಬಬಲೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!