ಕಾರ್-ಬೈಕ್ ನಡುವೆ ಭೀಕರ ಅಪಘಾತ

285

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ತಾಳಿಕೋಟೆ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಹಾನಿ ಆಗಿಲ್ಲ. ಆದರೆ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಗೊಂಡಿರುವ ಬೈಕ್ ಸವಾರ ಪ್ರಕಾಶ್ ತಾಳಿಕೋಟಿ ನಿವಾಸಿಯಾಗಿದ್ದಾನೆ. ಈತನನ್ನು ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎರಡು ವಾಹನಗಳು ನಜ್ಜುಗುಜ್ಜಾಗಿವೆ.




Leave a Reply

Your email address will not be published. Required fields are marked *

error: Content is protected !!