ಸರ್ವೋದಯ ಶಿಕ್ಷಣ ಸಂಸ್ಥೆ ವಿಚಾರ: ಹೊರಟ್ಟಿ ವಿರುದ್ಧದ ಕೇಸಿಗೆ ತಡೆಯಾಜ್ಞೆ

365

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆಯಾಜ್ಞೆ ನೀಡಲಾಗಿದೆ.

ಸರ್ವೋದಯ ಶಿಕ್ಷಣ ಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ನಾನು ಇಲ್ಲದಿದ್ದರೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಇದನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.




Leave a Reply

Your email address will not be published. Required fields are marked *

error: Content is protected !!