ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಪ್ರಕರಣ

97

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಯುವತಿಯ ವಿಡಿಯೋ ಮಾಡಿದ ಪ್ರಕರಣ ಸಂಬಂಧ, ಗುರುವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ಗೃಹ ಸಚಿವ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ 14 ಕಾರ್ಯಕರ್ತರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಅಂತಾ ಕಿಡಿ ಕಾರಲಾಗಿತ್ತು.




Leave a Reply

Your email address will not be published. Required fields are marked *

error: Content is protected !!