‘ವಿಪಕ್ಷ ನಾಯಕರಿಗೆ ಎಲ್ಲ ರೀತಿ ಭದ್ರತೆ ನೀಡುತ್ತೇವೆ’

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಸಿದ್ದರಾಮಯ್ಯನವರ ಜೊತೆಗೆ ಕರೆ ಮಾಡಿ ಮಾತನಾಡಿದ್ದೇನೆ. ವಿಪಕ್ಷ ನಾಯಕರಿಗೆ ಎಲ್ಲ ರೀತಿಯ ಭದ್ರತೆ ನೀಡುತ್ತೇವೆ ಎಂದರು.

ಡಿಜಿಪಿ ಅವರನ್ನು ಕರೆಯಿಸಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸಿದ್ದರಾಮಯ್ಯನವರಿಗೆ ಜೀವ ಬೆದರಿಕೆ ಇದೆ ಅನ್ನೋದು ಮಾಧ್ಯಮಗಳಲ್ಲಿ ಸುದ್ದಿ ಬಂದಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!