ಮಹಿಳೆ ಮೇಲೆ ಅಮಾನವೀಯ ಘಟನೆ: ಆಸ್ಪತ್ರೆಗೆ ಸಚಿವ ಜಾರಕಿಹೊಳಿ ಭೇಟಿ

229

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಪ್ರೀತಿಸಿದ ಹುಡುಗಿಯೊಂದಿಗೆ ಯುವಕ ಓಡಿ ಹೋದ ಪರಿಣಾಮ ಯುವತಿ ಕಡೆಯವರು, ಹುಡುಗನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಸಂತ್ರಸ್ತೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಚಿವ ಸತೀಶ್ ಜಾರಕಿಹೊಳಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸಂತ್ರಸ್ತ ಮಹಿಳೆ ಹಾಗೂ ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರ ಬಳಿ ಮನವಿ ಮಾಡಿದರು. ಈ ಸಂಬಂಧ ಈಗಾಗ್ಲೇ 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. 7 ಜನರನ್ನು ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!