ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

149

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾವೇರಿ ನದಿ ನೀರು ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಬುಧುವಾರ ಪ್ರತಿಭಟನೆ ನಡೆಸಿದವು. ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮಿಳುನಾಡು ಏಜೆಂಟ್ ರೀತಿ ವರ್ತಿಸಬಾರದು. ವಾಸ್ತವ ಸಂಗತಿ ಅರಿತುಕೊಳ್ಳಬೇಕು. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಪ್ರಧಾನಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿಯೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಈ ವೇಳೆ ಬಿಜೆಪಿ ಮಾಜಿ ಸಚಿವರು, ಸಂಸದರು ಹಾಗೂ ಜೆಡಿಎಸ್ ನಾಯಕರು ಹಾಜರಿದ್ದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.




Leave a Reply

Your email address will not be published. Required fields are marked *

error: Content is protected !!