ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಶಾಕ್ ಕೊಟ್ಟಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
ನ್ಯಾಯಮೂರ್ತಿ ಗಾವಾಯಿ ನೇತೃತ್ವದ ತ್ರಿಸದಸ್ಯ ಪೀಠದ ಎದುರು ಅರ್ಜಿ ವಿಚಾರಣೆ ನಡೆಯಿತು. ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಸಂಕಷ್ಟ ಸೂತ್ರ ಪಾಲನೆಯಾಗುತ್ತಿಲ್ಲ. ಕರ್ನಾಟಕ 2,500 ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದರು.
ಕರ್ನಾಟಕದ ಪರ ಹಿರಿಯ ವಕೀಲ ಶ್ಯಾಮದಿವಾನ್ ವಾದ ಮಂಡಿಸಿದರು. ಸಿಡಬ್ಲುಎಂಎ ಆದೇಶದಂತೆ ನೀರು ಬಿಟ್ಟಿದ್ದೇವೆ ಎಂದರು. ಎರಡು ಕಡೆ ವಾದ ಆಲಿಸಿದ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಗಳು ಸೆಪ್ಟೆಂಬರ್ 26 ತನಕ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದ್ದು, ಈ ಬಗ್ಗೆ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತೆ ಅನ್ನೋದರ ಮೇಲೆ ರಾಜ್ಯದಲ್ಲಿ ಹೋರಾಟದ ಮುನ್ಸೂಚನೆ ಸಿಗಲಿದೆ.