ತಮಿಳುನಾಡಿಗೆ ಕಾವೇರಿ ನೀರು

115

ಪ್ರಜಾಸ್ತ್ರ ಸುದ್ದಿ

ಮಂಡ್ಯ: ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದರ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಹೆಚ್ಚಾಗಿದೆ. ಇಂದು ಸಕ್ಕರೆ ನಾಡಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ.

ವಿವಿಧ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಮಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬಂದ್ ಗೆ ಜಿಲ್ಲೆಯ ವ್ಯಾಪಕ ಬೆಂಬಲ ವ್ಯಕ್ತವಾಗು ಸಾಧ್ಯತೆಯಿದೆ. ವ್ಯಾಪಾರಿಗಳು ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದ್ದು, ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಬಿಜೆಪಿ, ಜೆಡಿಎಸ್ ಸಹ ಪ್ರತಿಭಟನೆಗೆ ಬೆಂಬಲಿಸಿದ್ದು, ಎರಡೂ ಪಕ್ಷಗಳ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!