ಐಸಿಐಸಿಐ ಎಂಡಿ ಬಂಧನ ಬೆನ್ನಲ್ಲೇ ವಿಡಿಯೋಕಾನ್ ಸಿಇಒ ಬಂಧನ

227

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಿಡಿಯೋಕಾನ್ ಗ್ರೂಪ್ ಅಧ್ಯಕ್ಷ ಹಾಗೂ ಸಿಇಒ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಐಸಿಐಸಿಐ ಬ್ಯಾಂಕ್ ಲೋನ್ ವಂಚನೆ ಪ್ರಕರಣ ಸಂಬಂಧ ಕೇಂದ್ರ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಐಸಿಐಸಿಐ ಬ್ಯಾಂಕ್ ಲೋನ್ ವಂಚನೆ ಪ್ರಕರಣದಲ್ಲಿ ಎರಡು ದಿನಗಳ ಹಿಂದೆ ಮಾಜಿ ಸಿಇಒ ಹಾಗೂ ಎಂಡಿ ಚಂದಾ ಕೊಚ್ಚರ್ ಹಾಗೂ ಪತಿ ದೀಪಕ್ ಕೊಚ್ಚರ್ ಅವರನ್ನು ಬಂಧಿಸಿಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಂದಾ ಕೊಚ್ಚರ್ ಹಾಗೂ ಪತಿ ದೀಪಕ್ ಕೊಚ್ಚರ್

ಈ ಪ್ರಕರಣದಲ್ಲಿ ವಿಡಿಯೋಕಾನ್ ಕಂಪನಿಯ ಮುಖ್ಯಸ್ಥನ ಕೈವಾಡ ಇರುವ ಶಂಕೆಯ ಮೇಲೆ ಬಂಧಿಸಲಾಗಿದೆ. ಆರ್ ಬಿಐ ಮಾರ್ಗಸೂಚಿಗಳು ಹಾಗೂ ಬ್ಯಾಂಕ್ ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ಐಸಿಐಸಿಐ ಬ್ಯಾಂಕ್ ನಿಂದ ವಿಡಿಯೋಕಾನ್ ಕಂಪನಿಗೆ 3,250 ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂದು ಸಿಬಿಐ ಆರೋಪಿಸಿದೆ.




Leave a Reply

Your email address will not be published. Required fields are marked *

error: Content is protected !!