ಐಟಿ, ಇಡಿ ಬಳಿಕ ಡಿಕೆಶಿ ಮೇಲೆ ಸಿಬಿ‘ಐ’

331

ನವದೆಹಲಿ: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ, ಇಡಿ ದಾಳಿ ಬಳಿಕ ಇದೀಗ ಸಿಬಿಐ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದೆ. ನವದೆಹಲಿಯ ಸಫ್ದರ್ ಜಂಗ್ ನಲ್ಲಿರುವ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಶಾಸಕ ಡಿ.ಕೆ ಶಿವಕುಮಾರ ದೆಹಲಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಈ ಮೂಲಕ ಹೆಚ್ಚಿನ ಮಾಹಿತಿಯನ್ನ ಪಡೆಯುವ ಕೆಲಸ ಮಾಡಲಾಗ್ತಿದೆ.

ಇಂದು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆ ನಡೆಯಬೇಕಿದೆ. ಡಿಕೆಶಿ ಪತ್ನಿಗೆ ನೀಡಿರುವ ಸಮನ್ಸ್ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಹ ನಡೆಯಬೇಕಿದೆ. ಇದರ ನಡುವೆ ಸಿಬಿಐ ದಾಳಿ ಡಿಕೆಶಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟು ತಂದೊಡ್ಡುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!