ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾಣಿವೆ ನಾಡು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬರೋಬ್ಬರಿ 100ಕ್ಕೂ ಹೆಚ್ಚು ಅಧಿಕಾರಿಗಳು ಮನೆ, ಕಚೇರಿ ಸೇರಿ ವಿವಿಧ ಕಡೆ ದಾಳಿ ಮಾಡಿದ್ದಾರೆ.
ಸತ್ಯಪಾಲ್ ಮಲಿಕ್ ಅವರು ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ 2,220 ಕೋಟಿ ಮೌಲ್ಯದ ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಯೋಜನೆಗೆ ಸಂಬಂಧಪಟ್ಟ ಎರಡು ಫೈಲ್ ಗಳನ್ನು ತೆರವುಗೊಳಿಸಲು ಬರೋಬ್ಬರಿ 300 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ.