ಸಿಡಿ ಕೇಸ್: ಶಾ ಭೇಟಿಗೆ ಜಾರಿಹೊಳಿ ಸಿದ್ಧ!

133

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಡಿ ಪ್ರಕರಣ ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವೆ ತೀವ್ರ ಜಿದ್ದಾಜಿದ್ದಿ ನಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಮೇಶ ಜಾರಕಿಹೊಳಿ ಭೇಟಿಯಾಗಲಿದ್ದಾರಂತೆ.

ಇಂದು ಸಂಜೆ ರಮೇಶ ಜಾರಕಿಹೊಳಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸಿಡಿ ಪ್ರಕರಣ ಸಂಬಂಧ ಚರ್ಚೆ ನಡೆಸಲಿದ್ದು, ದಾಖಲೆ ಸಮೇತ ಅವರಿಗೆ ವಿವರಿಸಲಿದ್ದಾರಂತೆ. ಇದೆ ವೇಳೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!