ಸೆಂಟ್ರಲ್ ವಿಸ್ಟಾ ಯೋಜನೆಗೆ ಸುಪ್ರೀಂ ಅಸ್ತು

258

ಪ್ರಜಾಸ್ತ್ರ ಸುದ್ದಿ:

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ನೂತನ ಸಂಸತ್ ಕಟ್ಟಡ ನಿರ್ಮಾಣ ಸಂಬಂಧದ ಸೆಂಟ್ರಲ್ ವಿಸ್ಟಾ ಯೋಜನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ವಿಸ್ಟಾ ಯೋಜನೆಯ ಸಂಬಂಧ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀ ಕೋರ್ಟ್, ಯೋಜನೆ ಮುಂದುವರಿಕೆಗೆ ಓಕೆ ಎಂದಿದೆ.

ನ್ಯಾಯಮೂರ್ತಿಗಳಾದ ದಿನೇಶ ಮಹೇಶ್ವರಿ, ಸಂಜೀವ ಖನ್ನಾ ಹಾಗೂ ಎ.ಎಂ ಖಾನ್ವಿಲ್ಕರ್ ಅವರಿದ್ದ ತ್ರಿಸದಸ್ಯ ಪೀಠ ಸೆಂಟ್ರಲ್ ವಿಸ್ಟಾ ಯೋಜನೆಗೆ ಅನುಮೋದನೆ ನೀಡಿದೆ. ಪರಿಸರ ಸಮಿತಿಯ ಶಿಫಾರಸ್ಸು ಸರಿಯಾಗಿದೆ. ಪರಿಸರ ಸಚಿವಾಲಯದಿಂದ ನೀಡಿದ ಅನುಪತಿ ಶಿಫಾರಸ್ಸು ಸೂಕ್ತವಾಗಿದೆ. ಇದನ್ನ ನಾವು ಎತ್ತಿ ಹಿಡಿಯುತ್ತೇವೆ ಎಂದು ಹೇಳಿದೆ.

ಸೆಂಟ್ರಲ್ ವಿಸ್ಟಾ ಯೋಜನೆ ನೂತನ ಸಂಸತ್ ಕಟ್ಟಡ ನಿರ್ಮಾಣದ ಗುರಿ ಹೊಂದಿದೆ. ಇದನ್ನ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇಶಕ್ಕೆ ಸಮರ್ಪಣೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ.




Leave a Reply

Your email address will not be published. Required fields are marked *

error: Content is protected !!