ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನ!

486

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕೋಲಾರ: ಬಿಗ್ ಬ್ಯಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗ್ತಿದೆ. ಕೋಲಾರ ನಗರದ ಕುರುಬರ ಪೇಟೆಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಯತ್ನಿಸಿದ್ದು ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಂತೆ.

ಮಾರ್ಚ್ 28ರಂದು ಮಂಡ್ಯ ಮೂಲದ ನಾಗಾರ್ಜುನ ಅನ್ನೋ ರಿಯಲ್ ಎಸ್ಟೇಟ್ ಉದ್ಯಮಿಯನ್ನ ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾಗಿದ್ದರು. ಇದಾದ ಮುರುದಿನವೇ ಪೊಲೀಸ್ ಠಾಣೆ ಮೆಟ್ಟಿಲು ಏರಿತ್ತು. ನಾಗಾರ್ಜುನಗೆ ಈ ಮದುವೆ ಇಷ್ಟ ಇರ್ಲಿಲ್ಲವಂತೆ. ಸಂಘಟನೆಯೊಂದರ ಕೆಲವು ಜನರೊಂದಿಗೆ ಬಂದು ಬಲವಂತದಿಂದ ಮದುವೆ ಮಾಡಿಸಿದ್ದರು ಎಂದು ಹೇಳಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!