ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು

311

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉದ್ಯಮಿ ಗೋವಿಂದ್ ಬಾಬು ಪೂಜಾರಿ ಎಂಬುವರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಇಡೀ ದಿನ ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಸಂಜೆ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದರು. ಶುಕ್ರವಾರ ಮುಂಜಾನೆ ಮತ್ತೆ ವಿಚಾರಣೆಗೆ ಚಾಮರಾಜಪೇಟೆಯಲ್ಲಿನ ಕಚೇರಿಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ಕುಸಿದು ಬಿದ್ದಿದ್ದಾರೆ. ಬಾಯಿಯಲ್ಲಿ ನೊರೆ ಬಂದಿದೆ. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರಕರಣ ಸಂಬಂಧ ಈಗಾಗ್ಲೇ 5ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಕೋರ್ಟ್ ಮುಂದೆ ಹಾಜರು ಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಹೀಗಾಗಿ ಕಳೆದ ಎರಡ್ಮೂರು ದಿನಗಳಿಂದ ವಿಚಾರಣೆ ನಡೆಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ




Leave a Reply

Your email address will not be published. Required fields are marked *

error: Content is protected !!