ಚೈತ್ರಾ ಕುಂದಾಪುರ ಪ್ರಕರಣ ಬಿಜೆಪಿಗೆ ಸಂಬಂಧವಿಲ್ಲ: ಬೊಮ್ಮಾಯಿ

180

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ 7 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿರುವುದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಆದರೆ, ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಇದರಲ್ಲಿ ಸ್ವಾಮೀಜಿ ಇರಲಿ ಯಾರೇ ಇರಲಿ ಅವರಿಗೆ ಶಿಕ್ಷೆ ಆಗಬೇಕು. ತನಿಖೆ ಬಳಿಕ ಸತ್ಯ ಹೊರ ಬರಲಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!