ಚಾಮರಾಜನಗರ ಆಕ್ಸಿಜನ್ ದುರಂತ: ಮೃತ ಕುಟುಂಬಸ್ಥರಿಗೆ ಉದ್ಯೋಗ

175

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಕೋವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ನಡೆದ ಆಮ್ಲಜನಕ ಗ್ಯಾಸ್ ದುರಂತೆದಲ್ಲಿ ಒಂದೇ ದಿನದಲ್ಲಿ 32 ಮಂದಿ ಮೃತಪಟ್ಟಿದ್ದರು. ಈ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಮೃತರ ಕುಟುಂಬಸ್ಥರಿಗೆ ಉದ್ಯೋಗ ನೀಡುವ ಭರವಸೆ ನೀಡಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಫೆಬ್ರವರಿ 1ರಿಂದ ತಾತ್ಕಾಲಿಕ ಕೆಲಸ ನೀಡಲಾಗುವುದು. ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿಯನ್ನು ಭೇಟಿಯಾಗಬೇಕು. ಕಾಯಂ ಸರ್ಕಾರಿ ಉದ್ಯೋಗ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಯ ತನಕ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿ ಎಂದರು.




Leave a Reply

Your email address will not be published. Required fields are marked *

error: Content is protected !!