ಪ್ರಜಾಸ್ತ್ರ ಸುದ್ದಿ
ರಾಂಚಿ: ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೂರೆನ್ ಬಂಧನದ ಬಳಿಕ ನೂತನ ಸಿಎಂ ಆಗಿ ಚಂಪೂ ಸೊರೆನ್ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.
ಜೆಎಂಎಂ ಪಕ್ಷದ ಉಪಾಧ್ಯಕ್ಷರಾಗಿರುವ ಚಂಪೈ ಸೊರೆನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬುಧವಾರ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ, ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆ ಮೂಡಿತ್ತು.