ಚೆನ್ನವೀರಸ್ವಾಮೀಜಿ 128ನೇ ಜಯಂತ್ಯತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

258

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಸಾರಂಗಮಠ ಹಾಗೂ ಗಚ್ಚಿನಮಠದ ಚೆನ್ನವೀರಸ್ವಾಮೀಜಿಗಳ 128ನೇ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶ್ರೀಮಠದ ಪೀಠಾಧ್ಯಕ್ಷ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಮತ್ತು ಚೆನ್ನವೀರಸ್ವಾಮೀಜಿ ಪ್ರತಿಷ್ಠಾನದ ಸಂಚಾಲಕ ವಿ.ಡಿ ವಸ್ತ್ರದ, ನವೆಂಬರ್ 15ರಿಂದ ಡಿಸೆಂಬರ್ 7ರ ತನಕ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ನವೆಂಬರ್ 15ರ ಸಂಜೆ 6.30ಕ್ಕೆ ಎಡೆಯೂರು ತೋಂಟದ ಶ್ರೀ ಸಿದ್ಧಲಿಂಗೇಶ್ವರ ಪುರಾಣ ಪ್ರವಚನ ನಡೆಯಲಿದೆ. ನ.18ರಂದು ಮುಂಜಾನೆ 10 ಗಂಟೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಂಜೆ 6.30ಕ್ಕೆ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸನ್ಮಾನ, ನ.21ರಂದು ಜಂಗಮ ವಟುಗಳಿಗೆ ಅಯ್ಯಾಚಾರ ಹಾಗೂ ಲಿಂಗದೀಕ್ಷಾ ಕಾರ್ಯಕ್ರಮ, ನ.25ರಂದು ಸಿಂದಗಿಯ ತಾಯಿ ಶ್ರೀ ನೀಲಗಂಗಾದೇವಿ ವಿಷಯದ ಮೇಲೆ ಡಾ.ಎಂ.ಎಂ ಪಡಶೆಟ್ಟಿ ಅವರಿಂದ ಉಪನ್ಯಾಸ ನಡೆಯಲಿದೆ.

ಹೀಗೆ ಸುಮಾರು 23 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ಜೊತೆಗೆ ಸಾಧಕರಿಗೆ ಸನ್ಮಾನ ಮಾಡಲಾಗುತ್ತಿದೆ. ಡಿಸೆಂಬರ್ 6ರಂದು ಗಂಗಾಪೂಜೆ, ಡಿ.7ರಂದು ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥೋತ್ಸವದೊಂದಿಗೆ ಜಾತ್ರೆ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಜಿಲ್ಲೆ ಹಾಗೂ ತಾಲೂಕಿನ ವಿವಿಧ ಮಠಗಳ ಶ್ರೀಗಳು ಭಾಗವಹಿಸಲಿದ್ದಾರೆ ಎಂದರು. ಪ್ರಾಚಾರ್ಯ ಶರಣಬಸವ ಜೋಗೂರ ಸ್ವಾಗತಿಸಿ ವಂದಿಸಿದರು.




Leave a Reply

Your email address will not be published. Required fields are marked *

error: Content is protected !!