ಚಿಕ್ಕಬಳ್ಳಾಪುರ ಅಪಘಾತ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

174

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುರುವಾರ ಮುಂಜಾನೆ ಚಿಕ್ಕಬಳ್ಳಾಪುರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ಈ ಸಂಬಂಧ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಬರೋಬ್ಬರಿ 13 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲ ಆಂಧ್ರ ಮೂಲದವರೆಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!