ಗ್ಯಾರೆಂಟಿಗಳ ಜೊತೆಗೆ ಉಚಿತ ಭಯೋತ್ಪಾದನೆ: ಜೆ.ಪಿ ನಡ್ಡಾ

118

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸಿದ್ದರಾಮಯ್ಯನವರ ಸರ್ಕಾರ ರಾಜ್ಯದ ಜನತೆಗೆ ಗ್ಯಾರೆಂಟಿಗಳ ಜೊತೆಗೆ ಉಚಿತ ಭಯೋತ್ಪಾದನೆ ಕೊಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಾಗ್ದಾಳಿ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪಾಕಿಸ್ತಾನ್ ಘೋಷಣೆ ಕೂಗಿದವರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಯಾಕೆ ಮೌನ ವಹಿಸಿದ್ದಾರೆ. ಇವರೇನು ಪಾಕಿಸ್ತಾನದವರಾ? ಕಾಂಗ್ರೆಸ್ ಮಾಡುತ್ತಿರುವುದು ಭಾರತ್ ಜೋಡೋ ಯಾತ್ರೆನಾ ಅಥವ ಭಾರತ್ ಥೋಡೋ ಯಾತ್ರೆನಾ ಎಂದು ಕಿಡಿ ಕಾರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ಬಿಜೆಪಿ-ಜೆಡಿಎಸ್ ಜೋಡಿಯಾಗಿ ಎಲ್ಲ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದರು. ಈ ವೇಳೆ ಚುನಾವಣೆ ಉಸ್ತುವಾರಿ ರಾಧಾಮೋಹನದಾಸ್ ಅಗರವಾಲ್, ಶಾಸಕರಾದ ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ್ ಐಹೊಳೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!