ಸ್ಥಾಯಿ ಸಮಿತಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮಸೂದೆ

441

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಹೆಣ್ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಲೋಕಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2021 ಮಸೂದೆಯನ್ನು ಮಂಡಿಸಲಾಗಿದೆ. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ಈ ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ ಎಂದು ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈಗಿರುವ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡುವ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ. ನಮ್ಮ ದೇಶದಲ್ಲಿ ಮಹಿಳಾ ಸಮಾನತೆಯನ್ನು ಮದುವೆಯ ಯುಗದಲ್ಲಿ ನೋಡಬೇಕಾಗಿದೆ. ಸ್ವತಂತ್ರ ಬಂದು ಇಷ್ಟು ವರ್ಷಗಳ ನಂತರದಲ್ಲಿ ಮದುವೆ ವಿಚಾರದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಸಮಾನತೆ ನೀಡಲಾಗುತ್ತಿದೆ. ಇಬ್ಬರಿಗೂ 21ನೇ ವಯಸ್ಸಿಗೆ ಮದುವೆಯಾಗಲು ಅವಕಾಶ ನೀಡಲಾಗುತ್ತೆ ಎಂದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ ತಿದ್ದುಪಡಿ ಮಸೂದೆಯನ್ನು ವಿಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್, ಟಿಎಂಸಿ, ಎಐಎಂಐಎಂ ಸಂಸದರು ಇದನ್ನು ವಿರೋಧಿಸಿದ್ದಾರೆ. ಈ ಕಾರಣಕ್ಕೆ ಇದೀಗ ಇದು ಸ್ಥಾಯಿ ಸಮಿತಿ ಕಳುಹಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!