ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ: ರೌಡಿಶೀಟರ್ ಅರೆಸ್ಟ್

358

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡ್ತಿದ್ದ ರೌಡಿಶೀಟರ್ ಮಂಜುನಾಥ ಅಲಿಯಾಸ್ ಕೋಳಿಮಂಜನನ್ನ ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ನಗರ ಜಂಟಿ ಪೊಲೀಸ್ ಆಯುಕ್ತ ಸಂದೀಪ ಪಾಟೀಲ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಚಾಮರಾಜಪೇಟೆಯ ಜಿಂಕೆನಗರದ ನಿವಾಸಿಯಾಗಿರುವ ಈತನ ಮೇಲೆ ಕಳ್ಳತನ, ದರೋಡೆ ಸೇರಿ 8 ಪ್ರಕರಣಗಳಿವೆ. ಹೀಗಿರುವ ರೌಡಿಶೀಟರ್ ಕೋಳಿಮಂಜ, ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋವನ್ನ ಪೋಸ್ಟ್ ಮಾಡ್ತಿರುವ ಬಗ್ಗೆ ಬಸವೇಶ್ವರ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಜುಲೈ 17ರಂದು ಕೇಸ್ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಕೋಳಿಮಂಜನನ್ನ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!