ಚಿಕ್ಕಸಿಂದಗಿಗೆ ನೀರು ಹರಿಸಲು ಗ್ರೀನ್ ಸಿಗ್ನಲ್

293

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮಕ್ಕೆ ಚಿಮ್ಮಲಗಿ ಏತನೀರಾವರಿ ಯೋಜನೆಯ ಸೌಲಭ್ಯಕ್ಕೆ ಅನುಮೋದನೆ ಸಿಕ್ಕಿದೆ. ಸಮಿಶ್ರ ಸರ್ಕಾರದಲ್ಲಿ ಒಪ್ಪಿಗೆ ಪಡೆದಿದ್ದ ಯೋಜನೆಯನ್ನ ಬಳಿಕ ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ ಅನುಮೋದನೆ ಸಿಕ್ಕಿದೆ ಎಂದು ಶಾಸಕ ಎಂ.ಸಿ ಮನಗೂಳಿ ಅವರ ಸಹಾಯಕ ಪ್ರಸನ್ನ ಜೇರಟಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಮ್ಮಲಗಿ ಏತನೀರಾವರಿ ಯೋಜನೆ ಅಡಿಯಲ್ಲಿ ಕೋರವಾರ ಶಾಖಾ ಕಾಲುವೆ ನಂಬರ್ 1 ರಿಂದ 6ರ ವರೆಗಿನ ಕಾಲುವೆಗಳ ಮೂಲಕ ನೀರಿನ ಸೌಲಭ್ಯ ಕಲ್ಪಿಸಲು 38.86 ಕೋಟಿ ಅನುದಾವನ್ನ ಸರ್ಕಾರ ನೀಡಿದೆ. ಈ ಬಗ್ಗೆ ಶೀಘ್ರದಲ್ಲಿ ಟೆಂಡರ್ ಕರೆಯುವಂತೆ ಶಾಸಕ ಮನಗೂಳಿ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೂಚಿಸಿದ್ದಾರೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!