ಪ್ರಜಾಸ್ತ್ರ ಸಿನಿಮ ಡೆಸ್ಕ್
ಬಾಲಿವುಡ್ ಸಿನಿ ದುನಿಯಾದ ಖ್ಯಾತ ನೃತ್ಯ ನಿರ್ದೇಶಕಿ ಸರೋಜ್ ಖಾನ್ ನಿಧನರಾಗಿದ್ದಾರೆ. 71 ವರ್ಷದ ಖ್ಯಾತ ನೃತ್ಯ ನಿರ್ದೇಶಕಿ ಸರೋಜ್ ಖಾನ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಇಂದು ಬೆಳಗ್ಗೆ 2.30ಕ್ಕೆ ನಿಧನರಾಗಿದ್ದಾರೆ.
ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಇವರ ವರದಿ ನೆಗಟಿವ್ ಬಂದಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಸರೋಜ್ ಖಾನ್ ನಿಧನಕ್ಕೆ ಪ್ರಧಾನಿ ಸೇರಿದಂತೆ ಬಾಲಿವುಡ್ ಮಂದಿ ಸಂತಾಪ ಸೂಚಿಸಿದ್ದಾರೆ. 40 ವರ್ಷಗಳ ವೃತ್ತಿ ಬದುಕಿನಲ್ಲಿ 2 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.