ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪೊಲೀಸ್ ಇಲಾಖೆಯಿಂದ ಇತ್ತೀಚೆಗೆ ಹೊರಡಿಸಲಾಗಿರುವ 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
545 ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆದಿತ್ತು. ತಾತ್ಕಾಲಿಕ ನೇರ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದಾಖಲೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.