ಅ.1ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ?

235

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕೋವಿಡ್ 3ನೇ ಅಲೆ ಆತಂಕದಲ್ಲಿರುವುದರಿಂದ ಚಿತ್ರ ಮಂದಿರಗಳಲ್ಲಿ ಶೇಕಡ 100ರಷ್ಟು ಸೀಟು ಭರ್ತಿಗೆ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ ಸಾಕಷ್ಟು ಬಿಗ್ ಬಿಜೆಟ್ ಸಿನಿಮಾಗಳು ಕಾಯುತ್ತಿವೆ. ಈ ಸಂಬಂಧ ನಿರ್ಮಾಪಕರು, ನಿರ್ದೇಶಕರ ತಂಡ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರನ್ನು ಭೇಟಿ ಮಾಡಿದೆ.

ಅಕ್ಟೋಬರ್ 1ರಿಂದ ಶೇಕಡ 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಸಂಬಂಧ ಇನ್ನು 2-3 ದಿನಗಳಲ್ಲಿ ಆದೇಶ ಹೊರ ಬರಬಹುದು. ಚಿತ್ರಮಂದಿರಗಳಿಗೆ ಪೂರ್ತಿ ಅವಕಾಶ ಇರದೆ ಇರುವುದರಿಂದ ಅಲ್ಲಿ ಕೆಲಸ ಮಾಡುವ ಕಾರ್ಮಿಕರಿಂದ ಹಿಡಿದು ಪ್ರತಿಯೊಬ್ಬರಿಗೂ ತೊಂದರೆಯಾಗುತ್ತಿದೆ ಎಂದು ತಿಳಿಸಲಾಗಿದ್ದು, ಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!