ಕೋವಿಡ್ ನಿಯಮ ಪಾಲಿಸದಿದ್ದರೆ ಥಿಯೇಟರ್ ಬಂದ್

227

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡ 100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ. ಆದ್ರೆ, ಸ್ಟಾರ್ ನಟರ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಇದ್ಯಾವುದೂ ಪಾಲನೆ ಆಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಕೋವಿಡ್ ನಿಯಮ ಪಾಲನೆ ಮಾಡದ ಚಿತ್ರಮಂದಿರಗಳನ್ನು ಬಂದ್ ಮಾಡುವುದಾಗಿ ಹೇಳಿದ್ದಾರೆ.

ಮೊದಲ ಎರಡು ಬಾರಿ ಎಚ್ಚರಿಕೆ ನೀಡಲಾಗುವುದು. ಇಷ್ಟಾದರೂ ನಿಯಮಗಳನ್ನು ಪಾಲನೆ ಮಾಡದೆ ಹೋದರೆ ಥಿಯೇಟರ್ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!