ಕೇಂದ್ರ ಸಚಿವರೊಂದಿಗೆ ನೀರಾವರಿ ಯೋಜನೆ ಚರ್ಚಿಸಿದ ಸಿಎಂ

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರರು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಸಿದ್ರು.

ಕಳಸ ಬಂಡೂರಿ ಯೋಜನೆಗೆ ಕೇಂದ್ರದ ಕ್ಲಿಯರನ್ಸ್ ಕೊಡುವುದು, ಎತ್ತಿನಹೊಳೆ ಯೋಜನೆ, ಕೃಷ್ಣ ಯೋಜನೆ ನೊಟಿಫಿಕೇಷನ್,  ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಜಲ್ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚಿಸಲಾಗಿದೆ. ಮೊದಲು 25 ಲಕ್ಷ ಮನೆಗಳಿಗೆ ತ್ವರಿತವಾಗಿ ಸಂಪರ್ಕ ಕಲ್ಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಕೇಂದ್ರ ಸಚಿವ ಶೇಖಾವತ್ ಮಾತ್ನಾಡಿ, ಪಕ್ಷ ಬೇರೆ. ಸರ್ಕಾರ ಬೇರೆ. ಕೇಂದ್ರ ಸರ್ಕಾರದ ಪಾತ್ರ ಏನಿದೆಯೋ ಅದನ್ನು ಮಾಡುತ್ತೇವೆ ಎಂದು ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!