ಸಿಎಂ ಆಡಿಯೋ ಲೀಕ್: ಕ್ರಮಕ್ಕೆ ಕತ್ತಿ ಒತ್ತಾಯ

346

ಬೆಂಗಳೂರು: ಅನರ್ಹ ಶಾಸಕರ ರಾಜೀನಾಮೆ ಪ್ರಕರಣ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತ್ನಾಡಿರುವ ಆಡಿಯೋ ಪ್ರಕರಣ ದೊಡ್ಡ ಸಂಚಲನ ಮೂಡಿಸಿದೆ. ಇದು ಬರಿ ರಾಜ್ಯ ರಾಜಕಾರಣವಲ್ಲ ರಾಷ್ಟ್ರ ರಾಜಕಾರಣದಲ್ಲೂ ಬಿಜೆಪಿಗೆ ಮುಖಭಂಗ ಉಂಟು ಮಾಡಿದೆ.

ಈ ಬಗ್ಗೆ ಮಾತ್ನಾಡಿರುವ ಮಾಜಿ ಸಚಿವ ಉಮೇಶ ಕತ್ತಿ, ಆಡಿಯೋ ಲೀಕ್ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಒತ್ತಾಯಿಸಿದ್ದಾರೆ. ಸಿಎಂ ನಿವಾಸಕ್ಕೆ ಆಗಮಿಸಿ ಅವರನ್ನ ಭೇಟಿಯಾದ ಉಮೇಶ ಕತ್ತಿ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ರು. ಈ ವೇಳೆ ಆಡಿಯೋ ವಿಚಾರದ ಚರ್ಚೆ ನಡೆದಿದೆ. ಇದರ ಹಿಂದೆ ಬೆಳಗಾವಿಯ ಅತೃಪ್ತ ಬಣದ ಮೇಲೆ ಶಂಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತ್ನಾಡಿದ್ರು. ಅದರ ಆಡಿಯೋ ಬಿಡುಗಡೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!