ಓಮಿಕ್ರಾನ್ ಡೇಂಜರ್ ಪಟ್ಟಿಯಲ್ಲಿ ಕರ್ನಾಟಕ: ಸಿಎಂ ಬೊಮ್ಮಾಯಿ

224

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಓಮಿಕ್ರಾನ್ ಸೋಂಕಿನ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಇದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಜೊತೆಗೆ ಕರೆದಿರುವ ಸಭೆಗೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಅಪಾಯಕಾರಿ 8 ರಾಜ್ಯಗಳಲ್ಲಿ ಕರ್ನಾಟಕ ಸಹ ಇದೆ. ಮುಂದಿನ ದಿನಗಳಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ಕಡೆಗೆ ಹೋಗುತ್ತದೆ ಅನ್ನೋದು ನೋಡಿಕೊಂಡು, ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಕ್ಸಿಜನ್, ಬೆಡ್, ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಹೆಚ್ಚಳ ಮಾಡಲಾಗಿದೆ ಎಂದರು.

ಇನ್ನು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತೇನೆ. ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲೋಣ. ಇನ್ನು ಜಿಲ್ಲಾ ಮಟ್ಟದಲ್ಲಿ ಆಡಳಿತಾತ್ಮಕ ವಿಚಾರ ಹಾಗೂ ಕೈಗೊಳ್ಳಬೇಕಾದ ಕ್ರಮದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗುತ್ತೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!