ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

276

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದವರ ವಿರುದ್ಧ ಆಕ್ರೋಶ ಜೋರಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಕಾನೂನು ಮತ್ತು ಸುವ್ಯಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಅವರೊಂದಿಗೆ ಸಭೆ ನಡೆಸಿದ ಸಿಎಂ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!