ಸಿಎಂ ನಾಮಪತ್ರ ಸಲ್ಲಿಕೆ: ಸುದೀಪ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಭಾಗಿ

104

ಪ್ರಜಾಸ್ತ್ರ ಸುದ್ದಿ

ಶಿಗ್ಗಾಂವಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ. ಇಂದು ನಾಮಪತ್ರ ಸಲ್ಲಿಸುತ್ತಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಟ ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋ ನಡೆಯಲಿದೆ. ಈ ವೇಳೆ ರಾಷ್ಟ್ರೀಯ, ರಾಜ್ಯ ನಾಯಕರು ಹಾಗೂ ನಟ ಸುದೀಪ್ ಭಾಗಿಯಾಗಿ ಮತಯಾಚನೆ ಮಾಡಲಿದ್ದಾರೆ. ಸಂತ ಮೈದಾನದಿಂದ ಮೆರವಣಿಗೆ ಸಾಗಲಿದೆ. ಮಧ್ಯಾಹ್ನ ತಾಲೂಕು ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ನಡೆಯಲಿದೆ. ನಂತರ 1.30 ರಿಂದ 2ಗಂಟೆಯೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!