ಪ್ರಜಾಸ್ತ್ರ ಸುದ್ದಿ
ಮಂಗಳೂರು: ಬಿಜೆಪಿ ಸಮಾವೇಶಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ತೋರಿಸಲಾಗಿದೆ.
ಬಿ.ಸಿ ರಸ್ತೆಯ ಮೂಲಕ ಸಮಾವೇಶಕ್ಕೆ ಹೊರಟಿದ್ದ ಸಿಎಂಗೆ ಎಸ್ ಡಿಪಿಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದಾರೆ.