ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕೋವಿಡ್ 19 ಸೋಂಕಿನಿಂದ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಕುಟುಂಬಸ್ಥರನ್ನ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿ ಸಾಂತ್ವಾನ ಹೇಳಿದ್ರು. ಈ ವೇಳೆ ಸಚಿವರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಜೊತೆಯಾಗಿದ್ರು.
ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಹಾಗೂ ಸಚಿವರು, ಸುರೇಶ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ರು. ಬಳಿಕ ತಾಯಿ ಸೋಮವ್ವ, ಪತ್ನಿ ಮಂಗಳಾ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಸೇರಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ರು.