ಮುಸ್ಲಿಂ ಮುಖಂಡರೊಂದಿಗೆ ಸಿಎಂ ಸಭೆ

279

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಕರೋನಾ ಪರೀಕ್ಷೆ ಮಾಡಿಸಿಕೊಳ್ಳಿಯೆಂದು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ನಡೆಸಲಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಇದರ ಜೊತೆಗೆ ಸರ್ಕಾರಕ್ಕೆ ಸಹಕಾರ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಮುಸ್ಲಿಂ ಧಾರ್ಮಿಕ ಮುಖಂಡರು, ಜನ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!