7ನೇ ವೇತನ ಆಯೋಗದ ಬಗ್ಗೆ ಸಿಎಂ ಸ್ಪಷ್ಟನೆ

216

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: 7ನೇ ವೇತನ ಆಯೋಗ ಜಾರಿಯಾಗಬೇಕು ಹಾಗೂ ಹಳೆ ಪಿಂಚಣಿ ಯೋಜನೆ ಮತ್ತೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಹೋರಟ ನಡೆಸಲಾಗಿತ್ತಿದೆ. ನಾಳೆ ಕರ್ತವ್ಯಕ್ಕೆ ಗೈರು ಹಾಜರಿಯಾಗುವ ಮೂಲಕ ಅರ್ನಿಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡಲಾಗುತ್ತಿದೆ.

ಈ ಕುರಿತು ನಗರದಲ್ಲಿ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದ್ದಾರೆ. 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸಲಾಗುತ್ತಿದೆ. ಅದು ಬಂದ ಕೂಡಲೇ ಜಾರಿಗೊಳಿಸಲಾಗುವುದು. ಇದಕ್ಕಾಗಿ ಬಜೆಟ್ ನಲ್ಲಿ ಹಣ ಮೀಸಲು ಇಟ್ಟಿದ್ದೇವೆ. 2023-24ನೇ ಸಾಲಿನಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದಿದ್ದಾರೆ.

ಇನ್ನು ನಾಳೆ ಮುಷ್ಕರಕ್ಕೆ ಬೆಂಬಲಿಸಿ ಅನುದಾನಿತ, ಸರ್ಕಾರಿ ಶಾಲೆಯ, ಕಾಲೇಜುಗಳ ಶಿಕ್ಷಕರು, ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಿಯಾಗುತ್ತಿರುವುದರಿಂದ ಸೇವೆಯಲ್ಲಿ ಸಾಕಷ್ಟು ಸಮಸ್ಯೆಯಾಗಲಿದೆ.




Leave a Reply

Your email address will not be published. Required fields are marked *

error: Content is protected !!