ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಡಿಕೆಶಿ

281

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಇದಾದ ಮೇಲೆ ಡಿ.ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗಂಗಾಧರ ಅಜ್ಜನ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಮೇಲೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಂವಿಧಾನದ ಹೆಸರಿನಲ್ಲಿ ಡಾ.ಜಿ ಪರಮೇಶ್ವರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೆ.ಹೆಚ್.ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಜಮೀರ್ ಅಹ್ಮದ್ ಖಾನ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಬದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖಾರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಬಿಹಾರ ಸಿಎಂ ನಿತೇಶ್ ಕುಮಾರ್, ಮಹಾರಾಷ್ಟ್ರ ಮಾಜಿ ಸಿಎಂ ಸುಶಿಲಕುಮಾರ್ ಶಿಂದೆ, ಜಮ್ಮು-ಕಾಶ್ಮೀರ ಮಾಜಿ ಸಿಎಂ ಮಹಿಬೂಬ್ ಮುಫ್ತಿ ಸೇರಿದಂತೆ ಅನೇಕ ಗಣ್ಯ ನಾಯಕರು ಉಪಸ್ಥಿತರಿದ್ದರು.

ಈ ವೇಳೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!