ಸಿ.ಎಂ ಇಬ್ರಾಹಿಂಗೆ ಗೇಟ್ ಪಾಸ್ ಕೊಟ್ಟ ಜೆಡಿಎಸ್

242

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿ.ಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದಲೇ ಉಚ್ಛಾಟಿಸಲಾಗಿದೆ. ನಗರದ ಜೆ.ಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯ ಬಳಿಕ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು, ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದು ಸಭೆ ನಡೆಸಲಾಗಿದೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷರ ಜೊತೆಗೆ ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನೆಲ್ಲ ವಿಸರ್ಜನೆ ಮಾಡಲಾಗಿದೆ. ಈ ಮೂಲಕ ನಮ್ಮದೆ ಓರಿಜನಲ್ ಜೆಡಿಎಸ್ ಪಕ್ಷ ಎಂದಿದ್ದ ಸಿ.ಎಂ ಇಬ್ರಾಹಿಂಗೆ ಗೇಟ್ ಪಾಸ್ ಕೊಡಲಾಗಿದೆ.




Leave a Reply

Your email address will not be published. Required fields are marked *

error: Content is protected !!