ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆಯ ಹೈಲೈಟ್ಸ್

257

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸರ್ಕಾರದಲ್ಲಿ ಗೃಹ ಇಲಾಖೆ ನಿರ್ವಹಣೆ ಮಾಡಿದ್ದ ಇಂದಿನ ಸಿಎಂ ಬಸವರಾಜ ಬೊಮ್ಮಾಯಿ, ಮಂಗಳವಾರ ಮಧ್ಯಾಹ್ನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಾಯ್ತು.

ಪೊಲೀಸ್ ಇಲಾಖೆಯಲ್ಲಿ ಸುಧಾರಣೆ, ಮೂಲಸೌಲಭ್ಯ ಅಭಿವೃದ್ಧಿಗೆ ಚಾಲನೆ

ಕೋವಿಡ್ 3ನೇ ಅಲೆ ತಡೆಗಟ್ಟಲು ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ

ಗಡ್ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯ ಬಿಗಿಯಾಗಬೇಕು

ಅಪರಾಧ ಪ್ರಕರಣಗಳನ್ನ ಹತೋಟಿಗೆ ತರುವುದು

ಭೂವಿವಾದದ ಹಿನ್ನೆಲೆಯಲ್ಲಿ ನಡೆಯುವ ಅಪರಾಧ ತಪ್ಪಿಸಬೇಕು

ಮಾದಕ ವಸ್ತುಗಳ ವಿರುದ್ಧ ಹೋರಾಟ ಮುಂದುವರೆಯಲಿದ್ದು, ಪ್ರತಿ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು

ಪೊಲೀಸ್ ವ್ಯವಸ್ಥೆ ಜನಸ್ನೇಹಿ ಆಗಬೇಕು. ಕಾನೂನು ಸುವ್ಯಸ್ಥೆ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆ

ಇದೆ ವೇಳೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತ್ನಾಡಿ, ಇಲಾಖೆಯ ಅಪರಾಧ ಪ್ರಕರಣಗಳ ಶೀಘ್ರ ತನಿಖೆಯಾಗಬೇಕು. ವಿಳಂಬ ನೀತಿ ಅನುಸರಿಸಬಾರದು ಎಂದರು. ಇನ್ನು ಇಲಾಖೆ ಸುಧಾರಣೆಗೆ ಮುಖ್ಯಮಂತ್ರಿಗಳು ಬೆಂಬಲ ನೀಡಬೇಕು ಎಂದು ಕೋರಿದ್ರು.




Leave a Reply

Your email address will not be published. Required fields are marked *

error: Content is protected !!