ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಏಪ್ರಿಲ್ 14, 2023ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದನ್ನು ಪ್ರಶ್ನಿಸಿ ಸಿಎಂ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಅಂದು ತಾವು ಮಾಡಿದ ಪ್ರತಿಭಟನೆ ಕಾನೂನು ಬದ್ಧವಾಗಿದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಾರ್ಚ್ 6ರಂದು ಸಿಎಂ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ. ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿ ಬಂದಿತ್ತು. ಆಗ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು.