ರಾಜಕೀಯ ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

131

ಪ್ರಜಾಸ್ತ್ರ ಸುದ್ದಿ

ಮೈಸೂರು: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ನನಗೆ ಈಗ 77 ವರ್ಷ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ 82 ವರ್ಷ ಆಗುತ್ತೆ. ನನ್ನ ಆರೋಗ್ಯದ ಬಗ್ಗೆ ನನಗೆ ಗೊತ್ತಿದೆ. ಲವಲವಿಕೆಯಿಂದ ಓಡಾಡಲು ಆಗುವುದಿಲ್ಲ. ಹೀಗಾಗಿ ಚುನಾವಣೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ಕ್ಕೆ ನನಗೆ 82 ವರ್ಷ ಹಾಗೂ ರಾಜಕೀಯಕ್ಕೆ ಬಂದು 50 ವರ್ಷ ಆಗುತ್ತೆ. 1978ರಲ್ಲಿ ತಾಲೂಕು ಬೋರ್ಡ್ ಸದಸ್ಯನಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದೇನೆ. ಅವರವರ ದೇಹ ಸ್ಥಿತಿ ಅವರವರಿಗೆ ಗೊತ್ತಿರುತ್ತೆ. ನನಗೆ ಯಾವುದೇ ಆತಂಕ ಇಲ್ಲ. ಆರೋಗ್ಯ ಕಾರಣಕ್ಕೆ ಚುನಾವಣೆ ರಾಜಕಾರಣ ಸಾಕು ಎಂದುಕೊಂಡಿದ್ದೇನೆ ಅಂತಾ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಶಾಕ್ ಕೊಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!