ಸಿಎಂ ಸಭೆಯ ಹೈಲೈಟ್ಸ್.. ಯಾವ ಜಿಲ್ಲೆಗಳಿಗೆ ಏನು ಸೂಚನೆ?

391

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪನವರು, ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಚರ್ಚೆಯ ಪ್ರಮುಖ ಅಂಶಗಳು ಇಲ್ಲಿವೆ..

1 ಲಕ್ಷ ಟೆಸ್ಟ್ ಕಿಟ್ ಖರೀದಿಸಲಾಗಿದೆ. ತುರ್ತು ಪ್ರಕರಣಗಳಲ್ಲಿ ಪರೀಕ್ಷೆ ನಡೆಸಲು ಸೂಚನೆ

ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಬಳ್ಳಾರಿ, ಕಲಬುರಗಿಯಲ್ಲಿ ಹೆಚ್ಚು ಪ್ರಕರಣ

ಬೀದರ, ಧಾರವಾಡ, ಗದಗ, ಮೈಸೂರಿನಲ್ಲಿ ಸಾವಿನ ಪ್ರಕರಣ ಹೆಚ್ಚಳ

ಬೀದರ ಸಾವಿನ ಪ್ರಮಾಣದಲ್ಲಿ ದೇಶದಲ್ಲಿನ 5 ಜಿಲ್ಲೆಗಳಲ್ಲಿ ಒಂದಾಗಿದೆ. ಈ ಎಲ್ಲ ಜಿಲ್ಲಾಗಳಲ್ಲಿ ಸೋಂಕು ನಿಯಂತ್ರಣಕ್ಕೆ ಸೂಚನೆ

ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮ. ಹೊರಗಿನಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್

ಕರೋನಾ ಸೋಂಕು ಇಲ್ಲದ ರೋಗಿಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ

ಆರೋಗ್ಯ ಸಿಬ್ಬಂದಿ ಕೊರತೆಯಿದ್ದಲ್ಲಿ 6 ತಿಂಗಳು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಕ

ಯಾವುದೇ ಕಾರಣಕ್ಕೂ ಧಾರ್ಮಿಕ ಆಚರಣೆ, ಸಾರ್ವಜನಿಕ ಉತ್ಸವ ಮಾಡುವಂತಿಲ್ಲ

ಸೀಲ್ ಡೌನ್ ಏರಿಯಾಗಳಲ್ಲಿ ಕಠಿಣ ಕ್ರಮ. ಹೆಚ್ಚು ಪರೀಕ್ಷೆ ನಡೆಸಬೇಕು

ಆಸ್ಪತ್ರೆಗಳಲ್ಲಿ ಬೆಡ್, ಆಂಬ್ಯುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು

ಲಾಕ್ ಡೌನ್ ಬೇಕಾ ಬೇಡವಾ ಅನ್ನೋದರ ಕುರಿತು ಜಿಲ್ಲಾಧಿಕಾರಿಗಳ ಅಭಿಪ್ರಾಯ ಸಂಗ್ರಹ

ಹೀಗೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಹಲವರು ವಿಡಿಯೋ ಕಾನ್ಫ್ ರೆನ್ಸ್ ನಲ್ಲಿ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!