ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ

211

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಎರಡು ದಿನಗಳಿಂದ ಸಾರಿಗೆ ನೌಕರರು ನಡೆಸ್ತಿರುವ ಮುಷ್ಕರದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗ್ತಿದೆ. ಸರ್ಕಾರ ಎಷ್ಟೇ ಮನವಿ ಮಾಡಿಕೊಂಡರೂ ಕೇಳುತ್ತಿಲ್ಲ. ಈ ಬಗ್ಗೆ ಮಾತ್ನಾಡಿದ ಸಿಎಂ, ಸಾರಿಗೆ ನೌಕರರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಹಿಂದೆ ಸಾರಿಗೆ ನೌಕರರು ನೀಡಿದ್ದ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಲಾಗಿದೆ. 6ನೇ ವೇತನ ಆಯೋಗದ ವೇತನ ಸಾಧ್ಯವಿಲ್ಲ. ಕೂಡಲೇ ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಅನ್ನೋ ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!