13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

209

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಿರುವುದನ್ನು ನಗರದಲ್ಲಿರುವ ಐಟಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಕೋವಿಡ್ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕೋರ್ಟ್ 13 ನಾಯಕರಿಗೆ ಸಮನ್ಸ್ ನೀಡಿದೆ.

ಸೋಮವಾರ ನ್ಯಾಯಾಂಗದ ಮುಂದೆ ಹಾಜರಾಗುವಂತೆ ಹೇಳಿ ನೋಟಿಸ್ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ, ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಯು.ಟಿ ಖಾದರ್ ಕೆ.ಜೆ ಜಾರ್ಜ್, ಟಿ.ಬಿ ಜಯಚಂದ್ರ, ಶಾಸಕ ರಿಜ್ವಾನ್ ಅರ್ಷದ್, ಶಾಸಕಿ ಸೌಮ್ಯಾ ರೆಡ್ಡಿ, ಪರಮೇಶ್ವರ ನಾಯ್ಕ, ಎಂ.ನಾರಾಯಣಸ್ವಾಮಿ ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿ 13 ನಾಯಕರಿಗೆ ನೋಟಿಸ್ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!