ಹಾಸ್ಯ ನಟ ರಾಜು ಶ್ರೀವಾಸ್ತವ್ ನಿಧನ

323

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ಹಾಸ್ಯ ನಟ ರಾಜು ಶ್ರೀವಾಸ್ತವ್(58) ಇಂದು ನಿಧನರಾಗಿದ್ದಾರೆ. ಈ ಬಗ್ಗೆ ಅವರ ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ. ಕಳೆದ ಆಗಸ್ಟ್ 10ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಕಾನ್ಪೂರ್ ಮೂಲದ ರಾಜು ಶ್ರೀವಾಸ್ತವ್ ಬಾಲಿವುಡ್ ಅಂಗಳದಲ್ಲಿ ಸಣ್ಣಪುಟ್ಟ ಪಾತ್ರಗಳ ಮೂಲಕ ಕಾಣಿಸಿಕೊಂಡವರು. ಮೈನೆ ಪ್ಯಾರ್ ಕಿಯಾ, ಬಾಜಿಗರ್, ಬಾಂಬೆ ಟು ಗೋವಾ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಮುಂದೆ ಹಲವು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದರು. ಸ್ಮಾಲ್ ಸ್ಕ್ರೀನ್ ಗಳಲ್ಲಿಯೂ ಹೆಚ್ಚಾಗಿ ಕಾಣಿಸಿಕೊಂಡರು.

2014ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದರು. ಆದರೆ, ಮಾರ್ಚ್ 11ರಂದು ನಾಮಪತ್ರವನ್ನು ವಾಪಸ್ ಪಡೆದರು. ಮಾರ್ಚ್ 19ರಂದು ಬಿಜೆಪಿ ಸೇರಿದರು. ಕಾಮಿಡಿಯನ್ ರಾಜು ಶ್ರೀವಾಸ್ತವ್ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ.




Leave a Reply

Your email address will not be published. Required fields are marked *

error: Content is protected !!